HomeLatest Newsಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ: ಹೈಕೋರ್ಟ್

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ: ಹೈಕೋರ್ಟ್

ಬೆಂಗಳೂರು: ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವವರನ್ನು ಸೇವೆಯಿಂದ ತೆಗೆದು ಹಾಕಿದ್ದ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ಜ್ಯೋತಿ ಅವರ ಪೀಠ ಪೂರ್ವಾನುಮತಿ ಮತ್ತು ರಜೆ ಪಡೆದುಕೊಳ್ಳದೆ ವೆಂಕಟರಾಮಯ್ಯ 2016ರ ಡಿಸೆಂಬರ್ 1ರ ನಂತರ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. ಇದು ಸಾಬೀತದ ಹಿನ್ನೆಲೆಯಲ್ಲಿ ಬಿಎಂಟಿಸಿ ಸೇವೆಯಿಂದ ವಜಾ ಮಾಡಿದೆ. ಉದ್ಯೋಗ ನಿರ್ವಹಿಸುವ ವೇಳೆ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಇಲ್ಲದೆ ಗೈರಾಗುವುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಯಾವುದೇ ಉದ್ಯೋಗಿಯ ಗೈರು ಹಾಜರಿಯನ್ನು ಹಕ್ಕು ಎಂದು ಕ್ಲೇಮು ಮಾಡಲಾಗದು. ರಜೆ ಇಲ್ಲದೇ ಕೆಲಸಕ್ಕೆ ಗೈರಾಗುವುದು ಶಿಸ್ತಿನ ಉಲ್ಲಂಘನೆ, ಇಲ್ಲಿ ಅನಧಿಕೃತವಾಗಿ ಕೆಲಸಕ್ಕೆ ಗೈರಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ನೀಡಲಾಗಿದೆ. ದೀರ್ಘಾವಧಿ ಸೇವೆಯ ದುರ್ನಡತೆ ಕ್ಷಮಿಸುವ ಮಾನದಂಡವಲ್ಲ ಎಂದು ನ್ಯಾಯಪೀಠ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular