HomeLatest Newsಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ಉದ್ಯೋಗ

ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ಉದ್ಯೋಗ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ವಿಶೇಷ ಪ್ರಕರಣದಡಿ ಸಚಿವಾಲಯದಲ್ಲಿ ಅನುಕಂಪದ ಆಧಾರದಲ್ಲಿ ಸಿ ದರ್ಜೆ ಸಹಾಯಕಿ ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮಹಾಂತೇಶ್ ಬೀಳಗಿ ಕುಟುಂಬದವರಿಗೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ಜನಾನುರಾಗಿ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಜೇವರ್ಗಿ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular