HomeLatest Newsಜವಾಬ್ದಾರಿ ವಹಿಸಿಕೊಂಡ ಕೂಡಲೇ ಕರ್ತವ್ಯ ನಿಭಾಯಿಸಲೇಬೇಕು: ಬಳ್ಳಾರಿ ಎಸ್‌ಪಿ ಅಮಾನತು ಬಗ್ಗೆ ಸಚಿವ ಹೆಚ್.ಕೆ. ಪಾಟೀಲ್

ಜವಾಬ್ದಾರಿ ವಹಿಸಿಕೊಂಡ ಕೂಡಲೇ ಕರ್ತವ್ಯ ನಿಭಾಯಿಸಲೇಬೇಕು: ಬಳ್ಳಾರಿ ಎಸ್‌ಪಿ ಅಮಾನತು ಬಗ್ಗೆ ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗುಂಪು ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ್ದು, ಕರ್ತವ್ಯ ಲೋಪ ಆಧಾರದ ಮೇಲೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮತ್ತು ಅವರ ಕೆಳಹಂತದ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ.

ರಾಜಕೀಯ ಗುಂಪುಗಳ ನಡುವೆ ನಡೆದ ಘರ್ಷಣೆ ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಎಸ್ಪಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಜೊತೆಗೆ ಮೇಲಿನ ಹಂತದ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಹೀಗಾಗಿ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದವರ ಮೇಲೆ ಕ್ರಮ ಆಗಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಬಳ್ಳಾರಿ ಪ್ರಕರಣದಲ್ಲಿ ಪೋಲಿಸ್ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಿಲ್ಲ. ಹೀಗಾಗಿ ಎಸ್ಪಿ ಮತ್ತು ಕರ್ತವ್ಯ ಲೋಪ ಎಸಗಿದವರ ಮೇಲೆ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರು ಅಧಿಕಾರ ವಹಿಸಿಕೊಂಡ ಮೂರು ಗಂಟೆಯಲ್ಲಿ ನಡೆದ ಘಟನೆಗೆ ಅವರನ್ನು ಹೊಣೆ ಮಾಡಬಹುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಜವಾಬ್ದಾರಿ ವಹಿಸಿಕೊಂಡ ಒಂದು ಗಂಟೆಯಲ್ಲೇ ಘಟನೆ ನಡೆದರೂ ಅವರು ಸ್ಥಳಕ್ಕೆ ಭೇಟಿ ನೀಡಬೇಕಿತ್ತು. ಜವಾಬ್ದಾರಿ ವಹಿಸಿಕೊಂಡ 15 ನಿಮಿಷವಾದರೂ ಅವರು ಕಾರ್ಯನಿರ್ವಹಿಸಲೇಬೇಕು ಎಂದು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯ ನೂತನ ಎಸ್‍ಪಿಯಾಗಿ ಜನವರಿ 1ರಂದು ಪವನ್ ನೆಜ್ಜೂರ್ ಅಧಿಕಾರ ಸ್ವೀಕರಿಸಿದ್ದರು. ಮರುದಿನ ಜನವರಿ 2ರ ಶುಕ್ರವಾರ ಸಂಜೆ ಅವರನ್ನು ಅಮಾನತು ಮಾಡಲಾಗಿದೆ. ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎನ್ನುವ ಕಾರಣಕ್ಕೆ ಎಸ್‌ಪಿ ಅಮಾನತು ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಬಳ್ಳಾರಿಯಲ್ಲಿ ನಡೆದ ಬ್ಯಾನರ್ ತೆರವು, ಘರ್ಷಣೆಯ ಬಗ್ಗೆ ಹಿರಿಯ ಅಧಿಕಾರಿ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಘಟನೆ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಳ್ಳಾರಿ ವಲಯ ಡಿಐಜಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ವರದಿ ಆಧರಿಸಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular