ಬೆಂಗಳೂರು: ಸಿಮೆಂಟ್ ಡಿಸ್ಟ್ರಿಬ್ಯೂಟರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆಯ ತೋಟದಗುಡ್ಡದಹಳ್ಳಿಯಲ್ಲಿರುವ ಪ್ರತಾಪ್ ಎಂಬುವವರ ಮನೆ ಮೇಲೆ 25ಕ್ಕೂ ಹೆಚ್ಚು ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಸುಳ್ಳು ಲೆಕ್ಕ ತೋರಿಸಿ ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಸ್ಟ್ರೀಬ್ಯೂಟರ್ ಪ್ರತಾಪ್ ವಿರುದ್ಧ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

