HomeLatest NewsBREAKING : 'ಬಳ್ಳಾರಿ ಫೈರಿಂಗ್' ಪ್ರಕರಣದ ತನಿಖೆ ಚುರುಕು : 40 ಕ್ಕೂ ಹೆಚ್ಚು ಮಂದಿ...

BREAKING : ‘ಬಳ್ಳಾರಿ ಫೈರಿಂಗ್’ ಪ್ರಕರಣದ ತನಿಖೆ ಚುರುಕು : 40 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ.!

ಬಳ್ಳಾರಿ : ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ಚುರುಗೊಳಿಸಿದ ಪೊಲೀಸರು ಸುಮಾರು 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ, ಘರ್ಷಣೆಗಳು ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬಳ್ಳಾರಿ ಫೈರಿಂಗ್ ಪ್ರಕರಣದ ವಿಡಿಯೋಗಳನ್ನಾಧರಿಸಿದ ಪೊಲೀಸರು ತನಿಖೆ ನಡೆಸಿ ಎರಡೂ ಕಡೆಯಿಂದ 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ, ಜನಾರ್ಧನ ರೆಡ್ಡಿ ಮನೆ ಬಳಿ ಗುಂಡಿನ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಭರತ್ ರೆಡ್ಡಿಯನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ರೆಡ್ಡಿ ವಿರುದ್ಧ ಸಿಎಂ , ಗೃಹ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬ್ಯಾ ನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ, ಘರ್ಷಣೆಗಳು ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 5 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಕೀಯ ಮುಖಂಡರ ಗನ್ ಮ್ಯಾನ್ ಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಸತೀಶ್ ರೆಡ್ಡಿಯ ಗನ್ ಮ್ಯಾನ್ ಫೈರಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋಗಳುವೈರಲ್ ಆಗಿವೆ. ಇದರ ಬೆನ್ನಲ್ಲೇ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಗನ್ ಮ್ಯಾನ್ ಗಳ ಪತ್ತೆ ಕಾರ್ಯವೂ ಬರದಿಂದ ಸಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular