ಕಾರವಾರ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಹಿಂದೂ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪೊಲೀಸ್ ಠಾಣೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡು ಪೋಲಿಸ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಲ್ಲಾಪುರ ಪೊಲೀಸ್ ಠಾಣೆಯ ಮುಂದೆ ಎಸ್ಪಿ ಮತ್ತು ಎಎಸ್ಪಿ ಅವರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊಲೆ ನಡೆದು ಮೂರು ಗಂಟೆ ಕಳೆದರೂ ಆರೋಪಿಯನ್ನು ಏಕೆ ಬಂದಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ರಫೀಕ್ ಕುಟುಂಬದವರನ್ನು ಕೂಡಲೇ ಠಾಣೆಗೆ ಕರೆತಂದು ವಿಚಾರಣೆ ನಡೆಸಲು ಪಟ್ಟು ಹಿಡಿದಿದ್ದಾರೆ. ನಾಳೆ ಯಲ್ಲಾಪುರ ಪಟ್ಟಣ ಬಂದ್ ಗೆ ಕರೆ ನೀಡಲು ಹಿಂದೂ ಸಂಘಟನೆಗಳು ಸಿದ್ಧತೆ ನಡೆಸಿವೆ. ಯಲ್ಲಾಪುರ ಠಾಣೆಯ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಯಲ್ಲಾಪುರದಲ್ಲಿ ಚಾಕುವಿನಿಂದ ಇರಿದು 30 ವರ್ಷದ ರಂಜಿತಾರನ್ನು ರಫೀಕ್ ಕೊಲೆ ಮಾಡಿದ್ದು, ಆತನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

