HomeLatest Newsಮದುವೆಗೆ ಒಪ್ಪದ ಯುವತಿ ಹತ್ಯೆ: ಇಂದು ಯಲ್ಲಾಪುರ ಬಂದ್ ಕರೆ

ಮದುವೆಗೆ ಒಪ್ಪದ ಯುವತಿ ಹತ್ಯೆ: ಇಂದು ಯಲ್ಲಾಪುರ ಬಂದ್ ಕರೆ

ಯಲ್ಲಾಪುರ: ಮದುವೆಗೆ ಒಪ್ಪದ ಯುವತಿಯನ್ನು ಅನ್ಯಕೋಮಿನ ಯುವಕ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದು, ಘಟನೆಯನ್ನು ಖಂಡಿಸಿ ಇಂದು ಯಲ್ಲಾಪುರ ಬಂದ್ ಗೆ ನೀಡಲಾಗಿದೆ.

ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ಜನವರಿ 4ರಂದು ಯಲ್ಲಾಪುರ ಬಂದ್ ಗೆ ಕರೆ ನೀಡಿವೆ. ಬೆಳಗ್ಗೆ 9 ಗಂಟೆಗೆ ಬಸವೇಶ್ವರ ಸರ್ಕಲ್ ಬಳಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಕೊಲೆ ಆರೋಪಿಯನ್ನು ಬಂಧಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಪ್ರತಿ ಭಾನುವಾರ ಪಟ್ಟಣದಲ್ಲಿ ನಡೆಯುವ ಸಂತೆ ನಡೆಯುವ ಸಾಧ್ಯತೆ ಇಲ್ಲವೆನ್ನಲಾಗಿದೆ.

ಯಲ್ಲಾಪುರ ಪಟ್ಟಣದ ಆಶ್ರಯ ನಗರ ನಿವಾಸಿ ರಂಜಿತಾ(30) ಅವರನ್ನು ಕಾಳಮ್ಮ ನಗರದ ಮಹಮ್ಮದ್ ರಫೀಕ್ ಚಾಕುವಿನಿಂದ ಇರಿದು ಕೊಲೆ ಮಾಡಿ ಕಾಡಿನಲ್ಲಿ ಪರಾರಿಯಾಗಿದ್ದಾನೆ. ರಾಮಾಪುರ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ರಂಜಿತಾ ಈಗಾಗಲೇ ಮದುವೆಯಾಗಿದ್ದು, ಪತಿಯಿಂದ ದೂರವಾಗಿ ತವರು ಮನೆಯಲ್ಲಿ ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕೆಗೆ ಮದುವೆಯಾಗುವಂತೆ ಆರೋಪಿ ರಫೀಕ್ ಪೀಡಿಸುತ್ತಿದ್ದ. ನಿರಾಕರಿಸಿದ ಹಿನ್ನೆಲೆಯಲ್ಲಿ ಅಟ್ಟಗಟ್ಟಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನು ವಿರೋಧಿಸಿ ಸಾರ್ವಜನಿಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇಂದು ಯಲ್ಲಾಪುರ ಬಂದ್ ಗೆ ಕರೆ ನೀಡಲಾಗಿದೆ. ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆಯಿಂದ ಕೊಲೆ ಆರೋಪಿ ರಫೀಕ್ ಮನೆಗೆ ಭದ್ರತೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular