HomeLive Newsಹುಬ್ಬಳ್ಳಿಯಲ್ಲಿ ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಬಾಲಕಿ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ ಮೇಲ್

ಹುಬ್ಬಳ್ಳಿಯಲ್ಲಿ ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಬಾಲಕಿ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ ಮೇಲ್

ಹುಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿ ಮೇಲೆ ಮೂವರು ಬಾಲಕರು ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದಾರೆ.

ಒಂದೇ ಏರಿಯಾದಲ್ಲಿ ವಾಸವಾಗಿರುವ ಬಾಲಕಿ ಮತ್ತು ಮೂವರು ಅಪ್ರಾಪ್ತ ಬಾಲಕರು ಪರಿಚಿತರಾಗಿದ್ದಾರೆ. ಓರ್ವ ಬಾಲಕನ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅದನ್ನು ವಿಡಿಯೋ ಮಾಡಿಕೊಂಡು ಮತ್ತೊಬ್ಬ ಸ್ನೇಹಿತನಿಗೆ ಹೇಳಿದ್ದಾನೆ. ಮರುದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿದ ಆತ ಅತ್ಯಾಚಾರ ಎಸಗಿ ಮತ್ತೊಬ್ಬ ಸ್ನೇಹಿತರಿಗೆ ವಿಷಯ ತಿಳಿಸಿದ್ದಾನೆ. ಆತ ಕೂಡ ಮತ್ತೊಂದು ದಿನ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ.

ಮೂವರು ಬಾಲಕರು ವಿಡಿಯೋ ಇಟ್ಟುಕೊಂಡು ಬಾಲಕಿಗೆ ಬೆದರಿಸಿದ್ದು, ಆಕೆ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ತಾಯಿ ವಿಚಾರಿಸಿದ್ದಾರೆ. ಆಗ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾಳೆ. ಶಹರ ಪೊಲೀಸ್ ಠಾಣೆಗೆ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಮೂವರು ಆರೋಪಿತ ಬಾಲಕರು 14-15 ವರ್ಷದವರಾಗಿದ್ದಾರೆ. 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಶಹರ ಠಾಣೆ ಪೊಲೀಸರು ಅಪ್ರಾಪ್ತ ಬಾಲಕರ ವಿಚಾರಣೆ ನಡೆಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

12-13 ವರ್ಷ ವಯಸ್ಸಿನ ಬಾಲಕಿಗೆ ರಕ್ಷಣೆ ನೀಡಲಾಗಿದೆ ಮತ್ತು ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಅವರಲ್ಲಿ ಇಬ್ಬರು ಪ್ರೌಢಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ ಹುಡುಗ ಶಾಲೆ ಬಿಟ್ಟಿರುವಂತೆ ತೋರುತ್ತಿದೆ. ಈ ಕೃತ್ಯದ ವೀಡಿಯೊ ತಮ್ಮ ಬಳಿ ಇದೆ ಎಂದು ಹುಡುಗರು ಬಾಲಕಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಆರೋಪಿಗಳ ಮೊಬೈಲ್‌ ಗಳನ್ನು ಸಹ ವಶಪಡಿಸಿಕೊಳ್ಳಲಾಗುವುದು ಮತ್ತು ಅಗತ್ಯ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular