HomeLatest Newsರೀಲ್ಸ್ ಮಾಡಿ ವೃತ್ತಿ ಘನತೆಗೆ ಧಕ್ಕೆ ತಂದ ಆರೋಪ: ಐವರು ವಕೀಲರ ಸನ್ನದು ಅಮಾನತುಗೊಳಿಸಿ ಆದೇಶ

ರೀಲ್ಸ್ ಮಾಡಿ ವೃತ್ತಿ ಘನತೆಗೆ ಧಕ್ಕೆ ತಂದ ಆರೋಪ: ಐವರು ವಕೀಲರ ಸನ್ನದು ಅಮಾನತುಗೊಳಿಸಿ ಆದೇಶ

ಬೆಂಗಳೂರು: ರೀಲ್ಸ್ ಮಾಡುವ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿ ವೃತ್ತಿ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ವಕೀಲರ ಪರಿಷತ್(KSBC) ನಿಂದ ಐವರು ವಕೀಲರ ಸನ್ನದು ಅಮಾನತು ಮಾಡಲಾಗಿದೆ.

ಬೆಂಗಳೂರಿನ ವಿನಯಕುಮಾರ್, ಜಿ. ಮಂಜುನಾಥ್, ರೇಣುಕಾದೇವಿ, ಮೈಸೂರಿನ ವಿ. ರವಿಕುಮಾರ್, ಹುಣಸೂರಿನ ಎನ್. ಪುಟ್ಟೇಗೌಡ ಅವರ ಸನ್ನದು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಾಮಾಜಿಕ ಮಾಧ್ಯಮ ಮತ್ತು ಇತರ ಕಡೆ ರೀಲ್ಸ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿ ಮಾಡಿದ ಶಿಫಾರಸು ಒಪ್ಪಿಕೊಂಡು ಐದು ಮಂದಿಯ ತನಿಖೆ ಬಾಕಿ ಇರಿಸಿ ಸನ್ನದು ಅಮಾನತು ಮಾಡಲಾಗಿದೆ.

ಭಾರತೀಯ ವಕೀಲರ ಪರಿಷತ್ ನಿಯಮ 36 ವಕೀಲರ ಕರ್ತವ್ಯಕ್ಕೆ ಸಂಬಂಧಿಸಿದ್ದಾಗಿದೆ. ವಕೀಲರು ತಮ್ಮ ಕೆಲಸವನ್ನು ಯಾವುದೇ ರೀತಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಯಾವುದೇ ವಿಧಾನ ಅಥವಾ ಮಾಧ್ಯಮ ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಇದರ ಉಲ್ಲಂಘನೆ ವಕೀಲರ ಕಾಯಿದೆ ಸೆಕ್ಷನ್ 1961ರ ಪ್ರಕಾರ ಶಿಸ್ತು ಕ್ರಮಕ್ಕೆ ಅವಕಾಶ ನೀಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ಲೈನ್ ವೇದಿಕೆಗಳಲ್ಲಿ ಪ್ರಚಾರ ನಡೆಸುವುದು ವೃತ್ತಿಪರತೆಗೆ ವಿರುದ್ಧವೆಂದು ಮದ್ರಾಸ್ ಹೈಕೋರ್ಟ್ ಪ್ರಕರಣವೊಂದರಲ್ಲಿ ನೀಡಿದ ತೀರ್ಪಿನ ಅನುಸಾರ ಭಾರತೀಯ ವಕೀಲರ ಪರಿಷತ್ 2024ರ ಜುಲೈ 8ರಂದು ಅಕ್ರಮ ಚಟುವಟಿಕೆಗಳ ಬಗ್ಗೆ ವಕೀಲರಿಗೆ ಎಚ್ಚರಿಕೆ ನೀಡಿತ್ತು. ಅನುಮತಿ ಪಡೆದುಕೊಳ್ಳದೆ ಆನ್ಲೈನ್ ವೇದಿಕೆಗಳಲ್ಲಿ ಪ್ರಚಾರಕ್ಕೆ ಇಳಿದ ವಕೀಲರ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್ ಗಳಿಗೆ ನಿರ್ದೇಶನ ನೀಡಲಾಗಿತ್ತು. ಅಂತೆಯೇ ಈ ಐವರು ವಕೀಲತ ಸನ್ನದು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular