ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದಲ್ಲಿ ಮನೆ ಊಟ ಕೇಳಿದ್ದ ಎ1 ಆರೋಪಿ ಪವಿತ್ರಾಗೌಡಗೆ ಶಾಕ್ ಎದುರಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಅವರಿಗೆ ಮನೆ ಊಟ ನೀಡಲು ನ್ಯಾಯಾಲಯ ಅನುಮತಿ ನೀಡಿತ್ತು. ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಕಾರಾಗೃಹ ಇಲಾಖೆ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಲಿದ್ದಾರೆ.
ಕಾರಾಗೃಹದಲ್ಲಿ 4700 ಕೈದಿಗಳು ಕೂಡ ಅದೇ ಆಹಾರ ಸೇವಿಸುತ್ತಿದ್ದಾರೆ. ಜೈಲಿನಲ್ಲಿ ನೀಡುವ ಆಹಾರದಿಂದ ಯಾರಿಗೂ ತೊಂದರೆಯಾಗಿಲ್ಲ. ಜೈಲಿನಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನೇ ನೀಡಲಾಗುತ್ತಿದೆ. ಹಾಗಾಗಿ ಪವಿತ್ರಾ ಗೌಡಗೆ ಮನೆ ಊಟ ಅವಕಾಶ ನೀಡದಂತೆ ಮೇಲ್ಮನವಿ ಸಲ್ಲಿಸಲಾಗುವುದು.
ಈಗಾಗಲೇ ಜೈಲಿನ ಅಧಿಕಾರಿಗಳು SPP ಜತೆಗೆ ಚರ್ಚೆ ನಡೆಸಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಪವಿತ್ರಾಗೌಡ ಸೇರಿದಂತೆ ಮನೆ ಊಟ ಕೇಳಿದ್ದ ಇತರೆ ಕೈದಿಗಳಿಗೂ ಸಂಕಟ ಶುರುವಾಗಿದೆ.

