HomeLatest Newsಶಾಮನೂರು ಶಿವಶಂಕರಪ್ಪ, ಹೆಚ್.ವೈ. ಮೇಟಿ ನಿಧನದಿಂದ ತೆರವಾದ 2 ಕ್ಷೇತ್ರಗಳಿಗೆ ಉಪ ಚುನಾವಣೆಗೆ ಸಿದ್ಧತೆ

ಶಾಮನೂರು ಶಿವಶಂಕರಪ್ಪ, ಹೆಚ್.ವೈ. ಮೇಟಿ ನಿಧನದಿಂದ ತೆರವಾದ 2 ಕ್ಷೇತ್ರಗಳಿಗೆ ಉಪ ಚುನಾವಣೆಗೆ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಸಿದ್ದತೆ ಆರಂಭಿಸಿದೆ.

ಎರಡೂ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ ನೀಡಲಾಗಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದೆ. ಎರಡೂ ಕ್ಷೇತ್ರಗಳಿಗೆ ಸಂಬಂಧಿಸಿದ ಮತದಾರರ ಪಟ್ಟಿಗಳ ಕರಡನ್ನು ಶನಿವಾರ ಬಿಡುಗಡೆ ಮಾಡಲಾಗಿದೆ.

ಚುನಾವಣಾ ಆಯೋಗದ ವೆಬ್ಸೈಟ್, ಎರಡು ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ, ಮತದಾರರ ನೋಂದಣಿ ಅಧಿಕಾರಿ, ಸಹಾಯಕ ಮತದಾರರ ನೋಂದಣಿ ಅಧಿಕಾರಿ ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿ ಲಭ್ಯವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಬಂಧಿತ ಕ್ಷೇತ್ರಗಳ ಮತದಾರರು, ಪಟ್ಟಿಯಲ್ಲಿ ತಮ್ಮ ಹೆಸರು, ಮಾಹಿತಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ಆಕ್ಷೇಪಣೆ, ಮನವಿಗಳಿದ್ದಲ್ಲಿ ಜನವರಿ 3ರಿಂದ 24ರ ವರೆಗೆ ಸಲ್ಲಿಸಬಹುದು. ಫೆಬ್ರವರಿ 7ರೊಳಗೆ ಆಕ್ಷೇಪಣೆ, ಮನವಿಗಳನ್ನು ವಿಲೇವಾರಿ ಮಾಡಲಾಗುವುದು. ಫೆಬ್ರವರಿ 14ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular