ಬಳ್ಳಾರಿ: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಡಿಜಿಪಿ ಡಾ. ಸಲೀಂ ಅವರಿಗೆ ಜನಾರ್ದನ ರೆಡ್ಡಿ ಪತ್ರ ಬರೆದಿದ್ದಾರೆ.
ತಮ್ಮ ಕುಟುಂಬಕ್ಕೆ Z ಶ್ರೇಣಿಯ ಭದ್ರತೆ ನೀಡಬೇಕು. ಶಾಸಕ ಭರತ್ ರೆಡ್ಡಿ, ಸತೀಶ್ ರೆಡ್ಡಿ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ರಾಜ್ಯ ಸರ್ಕಾರ ಭದ್ರತೆ ನೀಡದಿದ್ದರೆ ಇನ್ಮುಂದೆ ದಾಳಿ ನಡೆದರೆ ಸರ್ಕಾರವೇ ಹೊಣೆ ಎಂದು ಪತ್ರದಲ್ಲಿ ಜನಾರ್ದನ ರೆಡ್ಡಿ ಉಲ್ಲೇಖಿಸಿದ್ದಾರೆ.
ಬಳ್ಳಾರಿ ಘರ್ಷಣೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಪತ್ರ ಬರೆದಿದ್ದು, ಕುಟುಂಬಕ್ಕೆ Z ಶ್ರೇಣಿಯ ಭದ್ರತೆ ನೀಡುವಂತೆ ಕೋರಿದ್ದಾರೆ.

