HomeLatest NewsBREAKING: ಬಳ್ಳಾರಿ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ಸಾವು ಪ್ರಕರಣ: ಸತೀಶ್ ರೆಡ್ಡಿಯ ಇಬ್ಬರು ಗನ್...

BREAKING: ಬಳ್ಳಾರಿ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ಸಾವು ಪ್ರಕರಣ: ಸತೀಶ್ ರೆಡ್ಡಿಯ ಇಬ್ಬರು ಗನ್ ಮ್ಯಾನ್ ಗಳು ಅರೆಸ್ಟ್

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ ಅವರ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಬಳ್ಳಾರಿಯ ಬ್ರೂಸ್ ಠಾಣೆ ಪೊಲಿಸರು ಬಂಧಿಸಿದ್ದಾರೆ. ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ಬಂಧಿತ ಗನ್ ಮ್ಯಾನ್ ಗಳು.

ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದ ಹಾರಿದ ಗುಂಡೇಟಿನಿಂದಲೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದಾರೆ ಎನ್ನಲಾಗಿದೆ. ಇಬ್ಬರು ಗನ್ ಮ್ಯಾನ್ ಗಳನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular