ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಾಗರಾಜ್ ತಳವಾರ್ ಹಾಗೂ ಪ್ರಶಾಂತ್ ತಳವಾರ್ ಬಂಧಿತ ಆರೋಪಿಗಳು. ನಾಗರಾಜ್ ತಳವಾರ್ ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬ್ಯಾಂಕ್ ಮ್ಯಾನೇಜ್. ಪ್ರಶಾಂತ್ ತಳವಾರ್ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ವಿಜಯಲಕ್ಷ್ಮೀ ದರ್ಶನ್ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ನನ್ನು ಬಂಧಿಸಲಾಗಿತ್ತು. ಈಗ ಬ್ಯಾಂಕ್ ಮ್ಯಾನೇಜರ್ ಹಾಗೂ ಆಡಿಟರ್ ನನ್ನು ಬಂಧಿಸಲಾಗಿದೆ.

