ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಐಡಿಗೆ ಬಹಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ, ಫೈರಿಂಗ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಖಾಸಗಿ ಗನ್ ನಿಂದ ಫೈರಿಂಗ್ ಆಗಿದೆ. ಖಾಸಗಿ ಗನ್ ಮ್ಯಾನ್ ರಿವಾಲ್ವಾರ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಯಾವ ಗನ್ ನಿಂದ ಫೈರಿಂಗ್ ಆಗಿದೆ ಎಂದು ಪರಿಶೀಲನೆ ನಡೆಸಲು ತಜ್ಞರಿಗೆ ವಹಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಲು ಯೋಜಿಸುತಿದ್ದೇವೆ. ಈ ಬಗ್ಗೆ ಸಿಎಂ ಜೊತೆಗೆ ಮಾತನಾಡಿ ಅಗತ್ಯವಿದ್ದಲ್ಲಿ ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರು ನೋಡಿ ಕ್ರಮ ಕೈಗೊಳ್ಳುತ್ತಾರೆ. ಖಾಸಗಿ ಗನ್ ನಿಂದ ಫೈರಿಂಗ್ ಆಗಿದ್ದು, ತನಿಖೆ ಆದ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ. ಅದಕ್ಕೊಂದು ನಿಯಮವಿದೆ. ಅದನ್ನು ಪೊಲೀಸರು ನಿರ್ವಹಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

