HomeLatest Newsಜ. 6 ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆಯಲಿರುವ ಸಿದ್ದರಾಮಯ್ಯ, ಜ. 7ರಂದು ಇತಿಹಾಸ ಸೃಷ್ಟಿ

ಜ. 6 ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆಯಲಿರುವ ಸಿದ್ದರಾಮಯ್ಯ, ಜ. 7ರಂದು ಇತಿಹಾಸ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ 6ರಂದು ದೇವರಾಜ ಅರಸು ಅವರ ದಾಖಲೆ ಸರಿಗಟ್ಟಲಿದ್ದಾರೆ. ಅತಿ ಹೆಚ್ಚು ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾದ ಇತಿಹಾಸ ಸೃಷ್ಟಿಸಲಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಊಳುವವನೇ ಹೊಲದೊಡೆಯ, ಸಾಮಾಜಿಕ ನ್ಯಾಯದ ಸಮೀಕರಣ ಮೂಲಕ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸು ಏಳೂವರೆ ವರ್ಷ ಮುಖ್ಯಮಂತ್ರಿ ಆಗಿದ್ದರು. ತಮ್ಮ ಆಡಳಿತ ಅವಧಿಯಲ್ಲಿ 2792 ದಿನ ದೇವರಾಜ ಅರಸು ಅಧಿಕಾರದಲ್ಲಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 6ರಂದು ದೇವರಾಜು ಅರಸು ಅವರ ದಾಖಲೆ ಸರಿಗಟ್ಟಲಿದ್ದು, ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಇತಿಹಾಸ ಸೃಷ್ಟಿಸಲಿದ್ದಾರೆ. ಸಿದ್ದರಾಮಯ್ಯ ಅವರು 2013-2018ರ ಅವಧಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ 1829 ದಿನ ಅಧಿಕಾರದಲ್ಲಿದ್ದರು. ಈಗ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿರುವ ಅವರು ಜನವರಿ 6ರಂದು ದೇವರಾಜ ಅರಸು ದಾಖಲೆ ಸರಿಗಟ್ಟಲಿದ್ದಾರೆ. ಜನವರಿ 7ರಂದು ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಾಖಲೆ ಬರೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವರಾಜ ಅರಸು ಸತತವಾಗಿ ಏಳೂವರೆ ವರ್ಷ ಅಧಿಕಾರದಲ್ಲಿದ್ದರು. ಮಧ್ಯದಲ್ಲಿ ಎಲ್ಲಿಯೂ ಕೆಳಗಿಳಿದಿಲ್ಲ. ಸಿದ್ದರಾಮಯ್ಯ ಮೊದಲ ಅವಧಿ ಪೂರ್ಣಗೊಂಡ ನಂತರ ಕಾಂಗ್ರೆಸ್ ಗೆ ಬಹುಮತ ಬಂದಿರಲಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದು ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ.

ಇನ್ನು 16 ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿರುವ ಸಿದ್ದರಾಮಯ್ಯ 17ನೇ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular