ರಾಮನಗರ: ಮಾಗಡಿ ತಹಶಿಲ್ದಾರ್ ಗೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಇದೀಗ ಕ್ಷಮೆಯಾಚಿಸಿದ್ದಾರೆ.
ಕೆಲ ದಿನಗಳ ಹಿಂದೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಶಾಸಕ, ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಆವಾಜ್ ಹಾಕಿದ್ದರು. ಶಾಸಕರ ಈ ಹೇಳಿಕೆ ಭಾರಿ ಆಕ್ರೋಶಕ್ಕೆ ವ್ಯಕ್ತವಾಗಿತ್ತು.
ಈಗ ಸರ್ಕಾರಿ ನೌಕರರ ತಾಲೂಕು ಕ್ರೀಡಾಕೂಟದ ವೇದಿಕೆಯಲ್ಲಿ ತಮ್ಮ ಮಾತಿಗೆ ಶಾಸಕರು ತಹಶಿಲ್ದಾರ್ ಬಳಿ ಕ್ಷಮೆ ಕೋರಿದ್ದಾರೆ. ಆಡು ಭಾಷೆಯಲ್ಲಿ ನೇರವಾಗಿ ಹಾಗೆ ಹೇಳಿದ್ದೆ. ನಿಮ್ಮ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ. ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

