HomeLatest NewsBIG NEWS: ಕಲಬುರಗಿ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

BIG NEWS: ಕಲಬುರಗಿ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ, ಸಬ್ ರಿಜಿಸ್ಟರ್ ಆಫೀಸ್ ಸೇರಿದಂತೆ ವಿವಿಧೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

15ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿ ಜಿಲ್ಲೆಯ ವಿವಿಧ ಇಲಾಖೆಗಳ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಲೋಕಾಯುಕ್ತ ನ್ಯಾಯಾಧೀಶ ವಿಜಯಾನಂದ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಅಧಿಕಾರಿಗಳು ಪಾಲಿಕೆಯ ಇ-ಆಸ್ತಿ ವಿಭಾಗ ಹಗೂ ಚುನಾವಣಾ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇ-ಆಸ್ತಿಯ ಒಂದು ಕಡತಕ್ಕೆ ಪಾಲಿಕೆ ಆಯುಕ್ತರು ಸಹಿ ಯಾಕೆ ಮಾಡಿಲ್ಲ? ಡಿ ಗ್ರೂಪ್ ನೌಕರರು ಸಮವಸ್ತ್ರ ಯಾಕೆ ಧರಿಸಿಲ್ಲ ಎಂಬಿತ್ಯಾದಿ ಪ್ರಶ್ನೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular