ರಾಮನಗರ: ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ತಹಶೀಲ್ದಾರ್ ಅವರ ಬಳಿ ಕ್ಷಮೆ ಕೋರಿದ್ದಾರೆ.
ಮಾಗಡಿ ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಬಾಲಕೃಷ್ಣ ಕ್ಷಮೆ ಯಾಚಿಸಿದ್ದಾರೆ. ನೌಕರರ ಸಂಘದ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಿದ್ದಾರೆ. ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಬಾಲಕೃಷ್ಣ ಹೇಳಿದ್ದರು. ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ನೌಕರರ ಸಂಘದ ಕಾರ್ಯಕ್ರಮದಲ್ಲಿ ತಮ್ಮ ಹೇಳಿಕೆಯ ಕುರಿತಾಗಿ ಶಾಸಕ ಬಾಲಕೃಷ್ಣ ಅವರು ತಹಶೀಲ್ದಾರ್ ಶರತ್ ಕುಮಾರ್ ಬಳಿ ಕ್ಷಮೆಯಾಚಿಸಿದ್ದಾರೆ.

