HomeKarnatakaBIG NEWS: ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ವಿರೋಧಿಸಿ ಜ. 8ರಂದು ಕಪ್ಪು ಪಟ್ಟಿ ಧರಿಸಿ...

BIG NEWS: ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ವಿರೋಧಿಸಿ ಜ. 8ರಂದು ಕಪ್ಪು ಪಟ್ಟಿ ಧರಿಸಿ ಪಾಠ

ಬೆಂಗಳೂರು: ಸೇವಾನಿರತ ಶಿಕ್ಷಕರಿಗೆ ಟಿಇಟಿ(ಶಿಕ್ಷಕರ ಅರ್ಹತಾ ಪರೀಕ್ಷೆ) ಕಡ್ಡಾಯ ಮಾಡಿದ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಿಂದ ಪಾರಾಗಲು ಸೂಕ್ತ ಕಾನೂನು ತಿದ್ದುಪಡಿ ತಂದು ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಜನವರಿ 8ರಂದು ರಾಜ್ಯಾದ್ಯಂತ ಶಿಕ್ಷಕರು ತರಗತಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪಾಠ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.

ಅಖಿಲ ಭಾರತ ಶಿಕ್ಷಕರ ಫೆಡರೇಶನ್ ನೇತೃತ್ವದಲ್ಲಿ ರಚನೆಯಾಗಿರುವ ಅಖಿಲ ಭಾರತ ಶಿಕ್ಷಕರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ದೇಶಾದ್ಯಂತ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಜನವರಿ 8ರಂದು ಪಾಠ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ರಾಜ್ಯದಲ್ಲಿಯೂ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಪಾಠ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ನಿಯಮ ಸಡಿಲಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪುನರ್ ಪರಿಶೀಲನೆ ಸಲ್ಲಿಸಿ ಕಾನೂನು ಹೋರಾಟ ಒಂದು ಕಡೆ, ಮತ್ತೊಂದು ಕಡೆ ಸರ್ಕಾರ ಹಾಲಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸೂಕ್ತ ಕಾನೂನು ತಿದ್ದುಪಡಿ ತರಬೇಕಿದೆ. ಇದರೊಂದಿಗೆ ಹಳೆಯ ಪಿಂಚಣಿ ಜಾರಿಗೊಳಿಸಬೇಕು. ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕ ಕೈ ಬಿಟ್ಟು ಕಾಯಂ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು. ದೇಶಾದ್ಯಂತ ಎಲ್ಲ ಶಿಕ್ಷಕರಿಗೆ ಏಕರೂಪದ ವೇತನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular