HomeIndiaಇಪಿಎಫ್ ಸೌಲಭ್ಯ ಪಡೆಯಲು ಕನಿಷ್ಠ ವೇತನ ಮಿತಿ ಹೆಚ್ಚಳ: 4 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ...

ಇಪಿಎಫ್ ಸೌಲಭ್ಯ ಪಡೆಯಲು ಕನಿಷ್ಠ ವೇತನ ಮಿತಿ ಹೆಚ್ಚಳ: 4 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ನೌಕರರ ಭವಿಷ್ಯ ನಿಧಿ(EPF) ಸೌಲಭ್ಯ ಪಡೆದುಕೊಳ್ಳಲು ಪ್ರಸ್ತುತ ಇರುವ 15000 ರೂ. ಕನಿಷ್ಠ ವೇತನ ಮಿತಿ ಹೆಚ್ಚಳ ಮಾಡುವ ಬಗ್ಗೆ ನಾಲ್ಕು ತಿಂಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಬೆಲೆ ಏರಿಕೆ, ಹಣದುಬ್ಬರ, ಕನಿಷ್ಠ ವೇತನ ಪ್ರಮಾಣ ಹೆಚ್ಚಳದ ನಡುವೆಯೂ ಕಳೆದ 11 ವರ್ಷಗಳಿಂದ ಇಪಿಎಫ್‌ ಗೆ ಅರ್ಹರಾಗಲು ಇರುವ ಕನಿಷ್ಠ ವೇತನ ಮಿತಿ ಹೆಚ್ಚಳ ಮಾಡಿಲ್ಲ. ಇದರಿಂದ 15 ಸಾವಿರ ರೂ.ಗಿಂತ ಹೆಚ್ಚು ವೇತನ ಪಡೆಯುವ ನೌಕರರು ಸಾಮಾಜಿಕ ಭದ್ರತಾ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ಪಿಎಫ್ ಕನಿಷ್ಠ ವೇತನ ಮಿತಿ ಹೆಚ್ಚಳಕ್ಕೆ ಆದಷ್ಟು ಬೇಗನೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ವಕೀಲರು ಮನವಿ ಮಾಡಿದ್ದು, ಇದನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯಪೀಠ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಕನಿಷ್ಠ ವೇತನ ಮಿತಿ ಏರಿಕೆ ಮಾಡುವ ಬಗ್ಗೆ ನಾಲ್ಕು ತಿಂಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ. ಈ ಬಗ್ಗೆ ಎರಡು ವಾರಗಳ ಒಳಗೆ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular