ಉಡುಪಿ : 2025-26ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ udupi.nic.in ನಲ್ಲಿ ಪಡೆದು ಸಂಪೂರ್ಣ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಮತ್ತು ಅರ್ಜಿಯಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ಲಗತ್ತಿಸಬಹುದಾಗಿದೆ.
ಆಸಕ್ತರು ದಿನಾಂಕ: 16/01/2026ರ ಸಂಜೆ 4:00 ಗಂಟೆಯೊಳಗೆ ಜಿಲ್ಲಾ ಯೋಜನಾ ನಿರ್ವಹಣಾ ಘಟಕ ಎನ್.ಹೆಚ್.ಎಮ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಸಲ್ಲಿಸುವುದು ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.


