ಬೆಂಗಳೂರು: ಸುದೀರ್ಘ ಅವಧಿಯ ಸಿಎಂ ಎಂದು ದಾಖಲೆ ನಿರ್ಮಿಸಿರುವ ಬೆನ್ನಲ್ಲೇ ತಾವು ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಆಲ್ ದಿ ಬೆಸ್ಟ್ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೀರ್ಘಾವಧಿ ಸಿಎಂ ಎಂದು ಸಿದ್ದರಾಮಯ್ಯನವರು ದಾಖಲೆ ನಿರ್ಮಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್ ಎಂದು ಹೇಳಿದರು.
ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ. ಅವರಿಗೆ ಶುಭವಾಗಲಿ ಎಂದು ಹೇಳಿದರು.
ನಮಲ್ಲಿ ಯಾರಿಗೂ ಯಾವುದೇ ಗೊಂದಲವಿಲ್ಲ, ಆದರೆ ಮಾಧ್ಯಗಳು ಗೊಂದಲ ಮಾಡುತ್ತಿವೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಪರೋಕ್ಷವಾಗಿ ತಿಳಿಸಿದರು.
ಸಿದ್ದರಾಮಯ್ಯನವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

