HomeLatest NewsBIG NEWS: ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರ ಉಳಿಯೋದು ಕಷ್ಟ: ಸಚಿವ ಹೆಚ್.ಸಿ.ಮಹದೇವಪ್ಪ

BIG NEWS: ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರ ಉಳಿಯೋದು ಕಷ್ಟ: ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ಸಚಿವ ಹೆಚ್.ಸಿ.ಮಹದೇವಪ್ಪ, ಸಿದ್ದರಾಮಯ್ಯ ಇಲ್ಲದಿದ್ದರೆ ಸರ್ಕಾರ ಉಳಿಯೋದು ಕಷ್ಟ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭ ಕೋರಿರುವ ಸಚಿವ ಮಹದೇವಪ್ಪ, ಮೈಸೂರಿನಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಇಲ್ಲದಿದ್ದರೆ ಪಕ್ಷವನ್ನು ಉಳಿಸೋದು ಕಷ್ಟ. ಮಾತ್ರವಲ್ಲ, ಸಿದ್ದರಾಮಯ್ಯ ಇಲ್ಲದಿದ್ದರೆ ಸರ್ಕಾರ ಉಳಿಯುವುದೂ ಕಷ್ಟಕರ ಎಂದಿದ್ದಾರೆ.

ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಹಾಗೂ ಅಹಿಂದ ಮುಳುಗುತ್ತದೆ. ಸಿದ್ದರಾಮಯ್ಯ ಇಲ್ಲದೇ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಷ್ಟು ಜನಾನ ಸುಮ್ಮನೇ ಸಿಎಮ್ ಸಿಎಂ ಎಂದು ಘೋಷಣೆ ಕೂಗ್ತೀರಾ? ನನ್ನನ್ನು ಸೇರಿದಂತೆ ಎಲ್ಲರನ್ನೂ ಸುಮ್ಮನೇ ಮುಂದಿನ ಸಿಎಂ ಘೋಷಣೆ ಕೂಗ್ತಾರೆ. ದಲಿತ ಸಂಘಟನೆಯ ಮುಖಂಡರು ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿ ಎಂದಿದ್ದಾರೆ. ಒಂದುವೇಳೆ ಅವರು ಬದಲಾದರೆ ದಲಿತರಿಗೆ ಅವಕಾಶ ಕೊಡಲಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು. ಈ ಬಾರಿ ಸಿದ್ದರಾಮಯ್ಯ ತಮ್ಮ ಅವಧಿ ಪೂರೈಸಬೇಕು. ಮುಂದಿನ ಅವಧಿಗೂ ಸಿದ್ದರಾಮಯ್ಯನವರೇ ಇರಬೇಕು ಎಂಬುದಕ್ಕೆ ನಮ್ಮ ತಕರಾರು ಇಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular