HomeLatest NewsBIG NEWS: ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: 4.5 ಲಕ್ಷ ಕಾರ್ಡ್ ರದ್ದು,...

BIG NEWS: ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: 4.5 ಲಕ್ಷ ಕಾರ್ಡ್ ರದ್ದು, 14.50 ಲಕ್ಷ ಮಂದಿ ಸೌಲಭ್ಯ ಕಡಿತ: ಸರ್ಕಾರಕ್ಕೆ ಪ್ರತಿ ತಿಂಗಳು 110 ಕೋಟಿ ರೂ. ಉಳಿತಾಯ: ಇನ್ನೂ 7.76 ಲಕ್ಷ ಕಾರ್ಡ್ ಕ್ಯಾನ್ಸಲ್ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಆರ್ಥಿಕ ಕಡಿಮೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿಗದಿತ ಮಾನದಂಡ ಉಲ್ಲಂಘಿಸಿ ಪಡೆದುಕೊಂಡಿದ್ದ ಸುಮಾರು 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.

ರದ್ದುಗೊಂಡ ಕಾರ್ಡ್ ದಾರರು ಸಹಜವಾಗಿಯೇ ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 110 ಕೋಟಿ ರೂಪಾಯಿಗೂ ಅಧಿಕ ಹಣ ಉಳಿತಾಯವಾಗುತ್ತದೆ.

ರಾಜ್ಯಾದ್ಯಂತ ಆಹಾರ ಇಲಾಖೆ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ. ಇದೊಂದೇ ಯೋಜನೆಯಿಂದ ತಿಂಗಳಿಗೆ ಸುಮಾರು 90 ಕೋಟಿ ಉಳಿತಾಯವಾಗುತ್ತದೆ. ಈ ಫಲಾನುಭವಿಗಳಿಗೆ ತಿಂಗಳಿಗೆ 72.50 ಲಕ್ಷ ಕ್ವಿಂಟಲ್ ಪಡಿತರ ವಿತರಿಸಲಾಗುತ್ತಿತ್ತು. ಇದಕ್ಕೆ ವೆಚ್ಚವಾಗುತ್ತಿದ್ದ ಅಂದಾಜು 22 ಕೋಟಿ ರೂಪಾಯಿ ಉಳಿತಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

7,76,206 ಬಿಪಿಎಲ್ ಕಾರ್ಡುಗಳನ್ನು ಶಂಕಾಸ್ಪದ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇವು ಕೂಡ ರದ್ದಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular