HomeLatest NewsBREAKING: ಗಾಂಜಾ ಮತ್ತಿನಲ್ಲಿ ಬಿದ್ದಿದ್ದ ಯುವಕನ ಮೇಲೆ ರೈಲು ಹರಿದು ಕೈ ಕಟ್, ಆಸ್ಪತ್ರೆಗೆ ಕರೆದೊಯ್ಯುವಾಗ...

BREAKING: ಗಾಂಜಾ ಮತ್ತಿನಲ್ಲಿ ಬಿದ್ದಿದ್ದ ಯುವಕನ ಮೇಲೆ ರೈಲು ಹರಿದು ಕೈ ಕಟ್, ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬುಲೆನ್ಸ್ ನಿಂದ ಜಿಗಿದು ಪರಾರಿ

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಬಿದ್ದಿದ್ದ ಯುವಕನ ಮೇಲೆ ರೈಲು ಹರಿದು ಕೈ ಕಟ್ ಆಗಿದೆ. ಉತ್ತರ ಭಾರತ ಮೂಲದ ದಿಲೀಪ್ ಎಂಬ ಯುವಕನ ಎಡಗೈ ಕಟ್ ಆಗಿದೆ.

ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆಂಬುಲೆನ್ಸ್ ನಿಂದ ಹೊರ ಜಿಗಿದು ಆತ ಎಸ್ಕೇಪ್ ಆಗಿದ್ದಾನೆ. ಕೈ ಕಟ್ ಆಗಿದ್ದನ್ನು ಮರೆತು ಓಡಿಹೋಗಿ ಯುವಕ ದಿಲೀಪ್ ಹುಚ್ಚಾಟ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕುಂಬಾರ ಬೀದಿಯಲ್ಲಿ ಘಟನೆ ನಡೆದಿದೆ.

ತಡರಾತ್ರಿ ಯುವಕ ದಿಲೀಪ್ ಹೈಡ್ರಾಮಾ ನಡೆಸಿದ್ದಾನೆ. ರೈಲು ಹರಿದು ಕೈಕಟ್ ಆಗಿ ಬಿದ್ದಿದ್ದ ದಿಲೀಪ್ ನನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಆಂಬುಲೆನ್ಸ್ ನಲ್ಲಿ ಹುಚ್ಚಾಟ ಮೆರೆದಿದ್ದಾನೆ. ಮೂರು ಬಾರಿ ಆಂಬುಲೆನ್ಸ್ ಗೆ ಹತ್ತಿಸಿದರೂ ಜಿಗಿದು ಪರಾರಿಯಾಗಿದ್ದಾನೆ. ದೇವನಹಳ್ಳಿ ಹಳೆ ಬಸ್ ನಿಲ್ದಾಣದಿಂದ ಓಡಿ ಹೋಗಿ ಕುಂಬಾರ ಬೀದಿಯ ಮನೆಗಳ ಬಳಿ ದಿಲೀಪ್ ಅಡಗಿಕೊಂಡಿದ್ದ. ಒಂದು ಗಂಟೆಗೂ ಅಧಿಕ ಕಾಲ ಹುಡುಕಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ದಿಲೀಪ್ ಗೆ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಟ್ ಆದ ಕೈಗೆ ಬ್ಯಾಂಡೇಜ್ ಹಾಕುವಾಗಲು ದಿಲೀಪ್ ಹುಚ್ಚಾಟ ನಡೆಸಿದ್ದು, ಹಣವಿಲ್ಲ ಚಿಕಿತ್ಸೆ ಬೇಡವೆಂದು ಹೇಳಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular