HomeLatest Newsಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್‍'ಗೆ ಅರ್ಜಿ ಆಹ್ವಾನ

ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್‍’ಗೆ ಅರ್ಜಿ ಆಹ್ವಾನ

ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಕರೆಯಲಾಗಿದ್ದು, ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ದಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖವನ್ನು ಬರೆದು ಜನವರಿ, 23 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಿಕೊಡಲು ಕೋರಿದೆ.

ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಲೋಶಿಪ್‍ಗಾಗಿ ಸಾಮಾನ್ಯ-1, ಪರಿಶಿಷ್ಟ ಜಾತಿ-5 ಮತ್ತು ಪರಿಶಿಷ್ಟ ಪಂಗಡ-9 ಮಂದಿಗಳು ಸೇರಿದಂತೆ 15 ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ https://janapada.karnataka.gov.in ನಿಂದ ಮಾಹಿತಿ ಪಡೆಯಬಹುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular