ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ನಲ್ಲೂರಹಳ್ಳಿಯಲ್ಲಿ ಈ ಕೊಲೆ ನಡೆದಿದೆ.
ಮೃತ ಬಾಲಕಿಯನ್ನು ಕೋಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎಂದು ಗುರುತಿಸಲಾಗಿದೆ. ಮಗುವನ್ನ ಕೊಂದ ದುಷ್ಕರ್ಮಿಗಳು ಶವವನ್ನು ಬ್ಯಾಗಿನಲ್ಲಿ ಹಾಕಿ ಪರಾರಿಯಾಗಿದ್ದಾರೆ.
ಅಕ್ಕ ಪಕ್ಕದ ಮನೆಯವರು ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಬಾಲಕಿ ತಾಯಿ ಹಾಗೂ ಪಕ್ಕದ ಮನೆಯವರ ಜೊತೆ ಗಲಾಟೆ ಆಗಿತ್ತು ಎನ್ನಲಾಗಿದೆ. ತಾಯಿಗೆ ಬುದ್ದಿ ಕಲಿಸಲು 6 ವರ್ಷದ ಬಾಲಕಿಯ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮಗುವನ್ನು ಕೊಂದ ದುಷ್ಕರ್ಮಿಗಳು ಶವ ಬ್ಯಾಗ್ ನಲ್ಲಿ ತುಂಬಿ ಚರಂಡಿಗೆ ಎಸೆದಿದ್ದಾರೆ.
ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಲ್ಲಾ ಕಡೆ ಹುಡುಕಾಡಿದ್ದಾರೆ. ತಡರಾತ್ರಿ ಬ್ಯಾಗ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವೈಟ್ ಫೀಲ್ಡ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

