ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹುಟ್ಟು ಹಬ್ಬ, ವಿವಾಹಕ್ಕೆ ಕಡ್ಡಾಯ ರಜೆ ನೀಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಹೌದು. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ನಿಂದ ಎಎಸ್ಐ ದರ್ಜೆವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿರುವ ಶ್ರೀ ಮೋಹನ್ ಕುಮಾರ್ ದಾನಪ್ಪ, ನಾಗರೀಕ ಸಮಾಜದ ಸದಸ್ಯರು, ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಇವರ ಪತ್ರವನ್ನು ಇದರೊಂದಿಗೆ ಲಗತ್ತಿಸಿ ನಿಯಮಾನುಸಾರ ಮುಂದಿನ ಕ್ರಮಕ್ಕಾಗಿ ಕಳುಹಿಸಲು ನಿರ್ದೇಶಿತನಾಗಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.


