HomeLatest NewsBIG NEWS : ಬಳ್ಳಾರಿ ಫೈರಿಂಗ್ ಪ್ರಕರಣ 'CBI' ಗೆ ಕೊಡುವ ಅಗತ್ಯವಿಲ್ಲ : ಗೃಹ...

BIG NEWS : ಬಳ್ಳಾರಿ ಫೈರಿಂಗ್ ಪ್ರಕರಣ ‘CBI’ ಗೆ ಕೊಡುವ ಅಗತ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ.!

ಬೆಂಗಳೂರು : ಬಳ್ಳಾರಿ ಫೈರಿಂಗ್ ಪ್ರಕರಣ ಹಲವು ತಿರುವು ಪಡೆದುಕೊಂಡಿದ್ದು, ಈಗಾಗಲೇ ಹಲವು ಆರೋಪಿಗಳ ಬಂಧನವಾಗಿದೆ. ಈ ಕುರಿತಂತೆ ಗೃಹ ಸಚಿವ ಜಿ.ಪರಮೇಶ್ವರ್ ಸುದ್ದಿಗಾರರ ಜೊತೆ ಮಾತನಾಡುತ್ತಾ ಬಳ್ಳಾರಿ ಫೈರಿಂಗ್ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಳ್ಳಾರಿ ಫೈರಿಂಗ್ ಪ್ರಕರಣ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ . ನಮ್ಮ ಪೊಲೀಸರಿಗೆ ತನಿಖೆ ಮಾಡುವ ಸಾಮರ್ಥ್ಯವಿದೆ. ನ್ಯಾಯಾಲಯದಿಂದ ಆದೇಶ ಬಂದಾಗ ಅಥವಾ ಇನ್ಯಾವುದೋ ಸನ್ನಿವೇಶ ಬಂದಾಗ ಇಂತಹ ಪ್ರಕರಣವನ್ನ ಸಿಬಿಐಗೆ ಕೊಡುತ್ತೇವೆ  ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ನಿನ್ನೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಈ ಘಟನೆ ಬಗ್ಗೆ ಹುಬ್ಬಳ್ಳಿ-ಧಾರವಾಡ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ನಾನು ಮತ್ತೇನು ಹೇಳುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದೇನು..?

ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ , ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಆರೋಪಗಳನ್ನು ನಿರಾಕರಿಸಿದ ಶಶಿ ಕುಮಾರ್, ಮಹಿಳೆ ತನ್ನ ಬಟ್ಟೆಗಳನ್ನು ತೆಗೆದು ಎಸೆದಿದ್ದಾಳೆ. ಮಹಿಳೆ ಪೊಲೀಸ್ ಅಧಿಕಾರಿಯನ್ನು ಕಚ್ಚಿ ಮೂರರಿಂದ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದೂ ಅವರು ಆರೋಪಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆಕೆಯನ್ನು ಬಂಧಿಸಲಾಯಿತು, ಅಲ್ಲಿ ಆಕೆ ಇನ್ನೊಬ್ಬ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಳು. ಆ ಸಂದರ್ಭದಲ್ಲಿ ಆಕೆಯನ್ನು ಬಂಧಿಸಲಾಯಿತು. ಬಂಧನ ಪ್ರಕ್ರಿಯೆ ನಡೆಯುತ್ತಿರುವಾಗ, ಆಕೆಯಿಂದ ಮತ್ತು ಆಕೆಯ ಸಂಪರ್ಕ ಹೊಂದಿದ್ದ ಜನರಿಂದ ಸಾಕಷ್ಟು ಪ್ರತಿರೋಧ ವ್ಯಕ್ತವಾಯಿತು” ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತರು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular