HomeKarnatakaಸಂಕ್ರಾಂತಿ ವಿಶೇಷ: ಬೆಂಗಳೂರು-ತಾಳಗುಪ್ಪ ವಿಶೇಷ ರೈಲು, ವೇಳಾಪಟ್ಟಿ

ಸಂಕ್ರಾಂತಿ ವಿಶೇಷ: ಬೆಂಗಳೂರು-ತಾಳಗುಪ್ಪ ವಿಶೇಷ ರೈಲು, ವೇಳಾಪಟ್ಟಿ

ಸಂಕ್ರಾಂತಿ ಹಬ್ಬ 2026ರ ತಯಾರಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಡುವೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ.

ಯಶವಂತಪುರ-ತಾಳಗುಪ್ಪ (06585) ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 13ರ ಮಂಗಳವಾರ ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 4:45ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06586 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 14ರ ಬುಧವಾರ ಬೆಳಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು, ಅಂದು ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಶೇಷ ರೈಲು ಪ್ರಥಮ ದರ್ಜೆ ಎಸಿ (1), ಎಸಿ ಟು ಟೈರ್ (2), ಎಸಿ ತ್ರೀ-ಟೈರ್ (6), ಸ್ಲೀಪರ್ ಕ್ಲಾಸ್, ಜನರಲ್ ಸೆಕೆಂಡ್ ಕ್ಲಾಸ್ (3) ಮತ್ತು ಎಸ್‌ಎಲ್‌ಆರ್/ ಡಿ (2) ಬೋಗಿಗಳು ಸೇರಿದಂತೆ 22 ಬೋಗಿಗಳನ್ನು ಒಳಗೊಂಡಿರುತ್ತದೆ.

ರೈಲು ಸಂಖ್ಯೆ 06587 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 23ರ ಶುಕ್ರವಾರ ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 24ರ ಶನಿವಾರ ಬೆಳಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಸಂಚರಿಸುವಾಗ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿವೆ.

ಈ ವಿಶೇಷ ರೈಲು ಪ್ರಥಮ ದರ್ಜೆ ಕಮ್ ಎಸಿ ಟು ಟೈರ್ (1), ಎಸಿ ತ್ರೀ-ಟೈರ್ (2), ಸ್ಲೀಪರ್ ಕ್ಲಾಸ್ (10), ಜನರಲ್ ಸೆಕೆಂಡ್ ಕ್ಲಾಸ್ (5) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಲಾಭವನ್ನು ಪಡೆದುಕೊಳ್ಳಲು ಹಾಗೂ ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular