ಡಿ ಫಾರ್ಮಸಿ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ವೆರಿಫಿಕೇಷನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.
ಜನವರಿ 10ರ ಮಧ್ಯಾಹ್ನ 3 ಗಂಟೆಯೊಳಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ವೆರಿಫಿಕೇಷನ್ ಸ್ಲಿಪ್ ನಲ್ಲಿ ದಾಖಲಿಸಿರುವಂತೆ ಎಲ್ಲ ಮೂಲ ದಾಖಲೆಗಳನ್ನು ಸಿದ್ಧಮಾಡಿಟ್ಟುಕೊಳ್ಳಬೇಕು. ಕಾಲೇಜು ಪ್ರವೇಶ ಸಂದರ್ಭದಲ್ಲಿ ಅವುಗಳ ಹಾಜರುಪಡಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

