HomeLatest NewsBIG NEWS: ಮೋಟಾರ್ ವಾಹನಗಳಿಗೆ ಪ್ರತ್ಯೇಕ ಸೆಸ್ ಸೇರಿ 10 ವಿಧೇಯಕಗಳಿಗೆ ರಾಜ್ಯಪಾಲ ಅಂಕಿತ

BIG NEWS: ಮೋಟಾರ್ ವಾಹನಗಳಿಗೆ ಪ್ರತ್ಯೇಕ ಸೆಸ್ ಸೇರಿ 10 ವಿಧೇಯಕಗಳಿಗೆ ರಾಜ್ಯಪಾಲ ಅಂಕಿತ

ಬೆಂಗಳೂರು: ವಾಹನಗಳ ನೋಂದಣಿ ಸಂದರ್ಭದಲ್ಲಿ ಬೇರೆ ಬೇರೆ ವರ್ಗಗಳ ಮೋಟಾರ್ ವಾಹನಗಳಿಗೆ ಪ್ರತ್ಯೇಕ ಸೆಸ್(ಉಪ ಕರ) ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಸೇರಿದಂತೆ 10 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅನುಮೋದನೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಪತ್ರ ಪ್ರಕಟಿಸಲಾಗಿದೆ.

ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ತಿದ್ದುಪಡಿ ವಿಧೇಯಕಕ್ಕೆ ರಾಜಪಾಲರು ಒಪ್ಪಿಗೆ ನೀಡಿದ್ದಾರೆ.

ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ಕಾಯ್ದೆ, ಕರ್ನಾಟಕ ಮಲೆ ಮಹದೇಶ್ವರ ಪ್ರಾಧಿಕಾರ ವಿಧೇಯಕ, ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕ, ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕ, ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ವಿಧೇಯಕ, ಬಯಲು ಸೀಮೆ ಮಂಡಳಿ ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಎರಡನೇ ತಿದ್ದುಪಡಿ ವಿಧೇಯಕ, ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಪ್ರಾಧಿಕಾರ ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular