ಬೆಂಗಳೂರು: 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಪಾವತಿಯಾಗಿಲ್ಲ. ಆರ್ಥಿಕ ಇಲಾಖೆಯಿಂದ ಹಣ ಬಂದ ಕೂಡಲೇ ಫಲಾನುಭವಿಗಳ ಖಾತೆಗೆ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆಗೆ ತಿಳಿಸಲಾಗಿದೆ. ಸಿಎಂ ಕೂಡ ಭರವಸೆ ನೀಡಿದ್ದಾರೆ. ಆರ್ಥಿಕ ಇಲಾಖೆಯಿಂದ ಹಣ ಬಂದ ಕೂಡಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದಾಗಿರುವ ಗೃಹಲಕ್ಷ್ಮಿ ಫಲಾನುಭವಿಗಳ ಸಹಾಯಧನ ಸ್ಥಗಿತಗೊಳಿಸಲಾಗುವುದು. ಕುಟುಂಬದಲ್ಲಿ ಯಾರಾದರೂ ಜಿಎಸ್‌ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಗೃಹಲಕ್ಷ್ಮಿ ಸಹಾಯಧನ ನೀಡುವುದಿಲ್ಲ. ಪಡಿತರ ಚೀಟಿ ಆಧರಿಸಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಪಾವತಿಸಲಾಗುತ್ತಿದೆ ಎಂದು ಹೇಳಿದ್ದಾರೆ.

