HomeLatest NewsBREAKING : ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ...

BREAKING : ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ.!

ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾದ ಘಟನೆ ತುಮಕೂರು ಬಳಿ ನಡೆದಿದೆ. ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಸಾಕ್ಷಿ ,(7) ವೆಂಕಟೇಶ್ವರಪ್ಪ, ಮಾರತಪ್ಪ , ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ. ಮೃತರ ಕೊಪ್ಪಳ ಜಿಲ್ಲೆ ಯಲಬುರ್ಗಿ ಮೂಲದವರು ಎಂದು ಹೇಳಲಾಗುತ್ತಿದೆ. ಕೇರಳದಿಂದ ತಮ್ಮ ಊರಿಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular