HomeLatest Newsಮಕ್ಕಳನ್ನು ವಸತಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಮಕ್ಕಳನ್ನು ವಸತಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿರುತ್ತದೆ. ಫೆಬ್ರವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಸೇವಾಸಿಂಧು ವೆಬ್‍ಸೈಟ್ https://sevasindhuservices.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಚಿತ್ರದುರ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular