ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ನಟ ವಿಜಯ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಬಿಡಿಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾ ಇಂದು ಬಿಡುಗಡೆಯಾಗಬೇಕಿತ್ತು, ಆದರೆ ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣಕ್ಕೆ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು. ಈ ಪ್ರಕರಣ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಜನ ನಾಯಗನ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವಂತೆ ಸಿಬಿಎಫ್ ಸಿಗೆ ಸೂಚನೆ ನೀಡಿದೆ.
‘ಜನ ನಾಯಗನ್’ ಸಿನಿಮಾಗೆ U/A ಸರ್ಟಿಫಿಕೇಟ್ ನೀಡಿ. ಸಿನಿಮಾ ಬಿಡುಗಡೆಗೆ ಇಂದೇ ಅವಕಾಶ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ಗೆ ದೊಡ್ದ ಜಯ ಸಿಕ್ಕಂತಾಗಿದೆ.
ರಾಜಕೀಯಕ್ಕೆ ಧುಮುಕಿರುವ ನಟ ವಿಜಯ್ ಇನ್ಮುಂದೆ ಚಿತ್ರರಂಗದಿಂದ ದೂರ ಸರಿಯಲಿದ್ದು, ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ವಿಜಯ್ ಅಭಿಮಾನಿಗಳಲ್ಲಿ ‘ಜನ ನಾಯಗನ್’ ಸಿನಿಮಾ ಬಗ್ಗೆ ಸಕಷ್ಟು ನಿರೀಕ್ಷೆಗಳು ಹೆಚ್ಚಿದ್ದು, ಜಗತ್ತಿನಾದ್ಯಂತ ವಿಜಯ್ ಅಭಿಮಾನಿಗಳು ಸಿನಿಮಾ ಬಿಡಿಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

