HomeLatest NewsBREAKING: ಕಂದಕಕ್ಕೆ ಜಾರಿ ಬಿದ್ದು ಇಬ್ಬರು ಯೋಧರು ಸಾವು

BREAKING: ಕಂದಕಕ್ಕೆ ಜಾರಿ ಬಿದ್ದು ಇಬ್ಬರು ಯೋಧರು ಸಾವು

ಶ್ರೀನಗರ: ಕಂದಕಕ್ಕೆ ಜಾರಿ ಬಿದ್ದು ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ನಲ್ಲಿ ಈ ದುರಂತ ಸಂಭವಿಸಿದೆ. ಹಿಮದಿಂದ ಆವೃತವಾಗಿದ್ದ ಗುಲ್ಮಾರ್ಗ್ ಬಳಿ ಕರ್ತವ್ಯ ನಿರ್ವಹಿಸಲು ತೆರಳುತ್ತಿದ್ದ ವೇಳೆ ಹಿಮದಿಂದ ಜಾರಿ ಕಂದಕಕ್ಕೆ ಬಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ.

ಸೇನಾ ಸಿಬ್ಬಂದಿ ಠಾಣೆಗೆ ತೆರಳುವಾಗ ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸೇನಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular