ಬೆಂಗಳೂರು : ರಾಜ್ಯದಲ್ಲಿ ಬಾಂಬ್ ಬೆದರಿಕೆ (Bomb Threat) ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿಗೆ ಬಾಂಬ್ ಬೆದರಿಕೆಯೊಡ್ಡುವ ಪ್ರಕರಣ ಹೆಚ್ಚುತ್ತಿದೆ.
ಇದೀಗ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಬ್ಬಾಳದ ಕೇಂದ್ರೀಯ ವಿದ್ಯಾಲಯದ ಇಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಇಮೇಲ್ ನೋಡಿದ ಕೂಡಲೇ ಪ್ರಾಂಶುಪಾಲರು ಸದಾಶಿವನಗರ ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಸಮೇತ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ನಂತರ ಇದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

