ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಬೈಕ್ ನಿಂದ ಆಯತಪ್ಪಿ ಕೆಳಗೆ ಬಿದ್ದವನ ಮೇಲೆ ಬಿಎಂಟಿಸಿ ಬಸ್ ಹರಿದು ಹೋದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸರಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ತ್ರಿಬಲ್ ರೈಡಿಂಗ್ ನಲ್ಲಿ ಬಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ. ಆತನ ತಲೆಯ ಮೇಲೆಯೇ ಬಸ್ ನ ಹಿಂಬದಿ ಚಕ್ರ ಹರಿದಿದೆ. ಸ್ಥಳದಲ್ಲೇ ಯುವಕ ಮೃತಪಟ್ಟಿದ್ದಾನೆ.
ಕಣಿರಾಜ್ (28) ಮೃತ ಯುವಕ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

