HomeLatest Newsಎಲ್ಲಾ ಜಿಲ್ಲೆಗಳಲ್ಲೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ಧರಾಮಯ್ಯ

ಎಲ್ಲಾ ಜಿಲ್ಲೆಗಳಲ್ಲೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ಧರಾಮಯ್ಯ

ವಿಜಯಪುರ: ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ  ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135  ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ₹82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ₹730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದರು.

ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್‌ನ್ನು ಸ್ಥಾಪಿಸಲಾಗಿದೆ. ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.

ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ ₹160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದಾರೆ, ಅದನ್ನು ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular