HomeLatest Newsಹಿಮಾಚಲ ಪ್ರದೇಶದಲ್ಲಿ ಬಸ್ ದುರಂತದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ಹಿಮಾಚಲ ಪ್ರದೇಶದಲ್ಲಿ ಬಸ್ ದುರಂತದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಬಳಿ ಗುಡ್ಡಗಾಡು ರಸ್ತೆಯಿಂದ ಖಾಸಗಿ ಬಸ್ ಉರುಳಿ ಬಿದ್ದು ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕುಪ್ವಿಯಿಂದ ಶಿಮ್ಲಾಕ್ಕೆ ಬಸ್ ತೆರಳುತ್ತಿತ್ತು. ಹರಿಪುರ್ಧರ್ ಪ್ರದೇಶದ ಕಿರಿದಾದ ರಸ್ತೆಯಲ್ಲಿ ಸುಮಾರು 30 ರಿಂದ 35 ಪ್ರಯಾಣಿಕರನ್ನು ಬಸ್ ಹೊತ್ತೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಬೆಟ್ಟದಿಂದ ಇಳಿಜಾರಿಗೆ ಉರುಳಿದೆ.

ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುಃಖಕರ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular