HomeKarnatakaಕಣ್ಣು ಕುಕ್ಕುವ ಪ್ರಖರ ಬೆಳಕು ಸೂಸುವ ಎಲ್ಇಡಿ ಲೈಟ್ ಬಳಸುತ್ತಿದ್ದ ವಾಹನಗಳಿಗೆ ದಂಡ

ಕಣ್ಣು ಕುಕ್ಕುವ ಪ್ರಖರ ಬೆಳಕು ಸೂಸುವ ಎಲ್ಇಡಿ ಲೈಟ್ ಬಳಸುತ್ತಿದ್ದ ವಾಹನಗಳಿಗೆ ದಂಡ

ಬೆಂಗಳೂರು: ಪ್ರಖರ ಬೆಳಕು ಹೊರಸೂಸುವ ಎಲ್ಇಡಿ ಲೈಟ್ ಬಳಸುತ್ತಿದ್ದ ವಾಹನಗಳಿಗೆ ಸಂಚಾರ ವಿಭಾಗದ ಪೊಲೀಸರು ತಂಡ ವಿಧಿಸಿದ್ದಾರೆ.

ಬೆಂಗಳೂರು ಸಂಚಾರ ಪೂರ್ವ ವಿಭಾಗದ ಠಾಣೆಗಳ ಪೊಲೀಸರು ಈ ಬಗ್ಗೆ ಎರಡು ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಹೆಚ್ಚು ಪ್ರಖರ ಬೆಳಕು ಹೊರಸೂಸುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಗಳನ್ನು ಅಳವಡಿಸಿದ್ದ ವಾಹನ ಸವಾರರು ಮತ್ತು ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ.

ಈ ವಿಶೇಷ ಕಾರ್ಯಾಚರಣೆಯ ವೇಳೆ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದ್ದು, 568 ಪ್ರಕರಣ ದಾಖಲಿಸಿ 2.84 ಲಕ್ಷ ರೂಪಾಯಿ ದಂಡ ಸಂಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular