ಬೆಂಗಳೂರು : ಬೆಂಗಳೂರಿನಲ್ಲಿ ಕಾಮುಕರ ಕಾಟ ವಿಪರೀತವಾಗಿ ಹೆಚ್ಚಾಗುತ್ತಿದೆ. ಡೆಲಿವರಿ ಬಾಯ್ ಓರ್ವ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೊತ್ತನೂರಿನ ವಿಧಾನಸೌಧ ಲೇಔಟ್ ನಲ್ಲಿ ನಡೆದಿದೆ.
ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಯುವತಿಯನ್ನು ಬಾ ಎಂದು ಕರೆದಿದ್ದಾನೆ. ಅಲ್ಲದೇ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಕೂಡಲೇ ಯುವತಿ ಯುವಕನ ಕೆನ್ನೆಗೆ ಹೊಡೆದಿದ್ದು,ಜೋರಾಗಿ ಕಿರುಚಿಕೊಂಡಿದ್ದಾಳೆ. ಕೂಡಲೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.ಯುವತಿ ತನ್ನ ಮನೆ ಮುಂದೆ ಬಿದ್ದಿದ್ದಂತಹ ಬಾಕ್ಸ್ ನ್ನು ತೆಗೆದುಕೊಂಡು ಹೋಗುತ್ತಿರುವಾಗ ಡೆಲಿವರಿ ಬಾಯ್ ಈ ಕೃತ್ಯ ಎಸಗಿದ್ದಾನೆ.
ಘಟನೆ ಬಳಿಕ ಕೊತ್ತನೂರು ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮನಿರುದ್ದೀನ್ ಖಾನ್ ಎಂದು ಗುರುತಿಸಲಾಗಿದೆ.

