ಬೆಂಗಳೂರು: ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ ಕಾರು ಚಾಲಕ ಸೈಮನ್ ಎಂಬುವವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಕಿಲಾ, ಹ್ಯಾಲಿಸನ್, ಲಿಯೋ, ಇಲಿಯಾಸ್ ಗಾಯಾಳುಗಳು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

