ಬೆಂಗಳೂರಲ್ಲಿ : ಬೆಂಗಳೂರಲ್ಲಿ ಕಾಮುಕರಿಗೆ ಪೊಲೀಸರ ಭಯವೇ ಇಲ್ಲವೇ..? ಪ್ರತಿನಿತ್ಯ ಬೆಂಗಳೂರಲ್ಲಿ ಒಂದಲ್ಲ ಒಂದು ಇಂತಹ ಪ್ರಕರಣಗಳು ವರದಿ ಆಗುತ್ತಲೇ ಇರುತ್ತದೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಟೆಕ್ಕಿಯೊಬ್ಬರು ತಾವು ಕೆಲಸ ಮಾಡುವ ಕಂಪನಿಯಿಂದ ಮಾನ್ಯತಾ ಟೆಕ್ ಪಾರ್ಕ್ ಗೆ ತೆರಳಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಪ್ರಯಾಣದ ವೇಳೆ ಆತ ಆಕೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಆಕೆ ಜೋರಾಗಿ ಗಲಾಟೆ ಮಾಡಿದ್ದಕ್ಕೆ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಮತ್ತು ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ವಿವೇಕ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

