HomeLatest NewsBREAKING: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪ್ರಶ್ನೆ ಪತ್ರಿಕೆ ಲೀಕ್: ಸೋರಿಕೆಯಾಗಿದ್ದ ಪರೀಕ್ಷಾ ಕೇಂದ್ರ ಪತ್ತೆ

BREAKING: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪ್ರಶ್ನೆ ಪತ್ರಿಕೆ ಲೀಕ್: ಸೋರಿಕೆಯಾಗಿದ್ದ ಪರೀಕ್ಷಾ ಕೇಂದ್ರ ಪತ್ತೆ

ಬೆಳಗಾವಿ: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರೀಕ್ಷಾ ಕೇಂದ್ರ ಪತ್ತೆಯಾಗಿದೆ.

ಬೆಳಗಾವಿಯಲ್ಲಿ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನವೇ ಇಂದು ಸೋರಿಕೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ವೈರಲ್ ಆಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಪ್ರಶ್ನೆ ಪತ್ರಿಕೆ ಮೇಲಿರುವ ಕೋಡ್ ಮೂಲಕವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಪರೀಕ್ಷಾ ಕೇಂದ್ರವನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಬೆಳಗಾವಿ ಡಿಡಿಪಿಐ ಲೀಲಾವತಿ ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಲಕ್ಷ್ಮೀನಗರದಲ್ಲಿರುವ ಸೆಂಟ್ ಮೀರಾ ಶಾಲೆಯಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಡಿಡಿಪಿಐ ಪರೀಕ್ಷಾ ಕೇಂದ್ರವಾಗಿರುವ ಶಾಲೆಗೆ ಭೇಟಿ ನೀಡಿದ್ದು, ಬೆಳಿಗ್ಗೆಯಿಂದ ಪರೀಕ್ಷೆ ಪರೀಕ್ಷೆ ಆರಂಭವಾಗುವವರೆಗಿನ ಸಿಸಿಟಿವಿ ಕ್ಯಾಮರಾ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲೆಯ ಸಿಬ್ಬಂದಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular