ಕಲಬುರಗಿ: ದ್ವಿತೀಯ ಪಿಯುಸಿ ಇಂಗ್ಲೀಷ್ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಡಿಡಿಪಿಐ ಸುರೇಶ್ ಅಕ್ಕಣ್ಣನವರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಜನವರಿ 8ರಂದು ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಹಿಂದಿನ ದಿನ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇಂಗ್ಲಿಷ್ ಪತ್ರಿಕೆ ಹರಿದಾಡಿತ್ತು.
ಪ್ರಶ್ನೆ ಪತ್ರಿಕೆ ಹರಿಬಿಟ್ಟಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿದೆ. ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

