ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಿಸಕಟ್ಟೆ ಗ್ರಾಮದ ಬಳಿ ಬೀದರ್ -ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ(22), ನಂಜುಂಡಿ(23), ರಾಹುಲ್(23) ಯಶವಂತ(22) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

