HomeLatest Newsಭಾರೀ ಚಳಿ, ಶೀತ ಗಾಳಿಗೆ ಥಂಡಾ ಹೊಡೆದ ರಾಜ್ಯದ ಜನತೆಗೆ ಬಿಗ್ ಶಾಕ್: ಜ. 14ರವರೆಗೂ...

ಭಾರೀ ಚಳಿ, ಶೀತ ಗಾಳಿಗೆ ಥಂಡಾ ಹೊಡೆದ ರಾಜ್ಯದ ಜನತೆಗೆ ಬಿಗ್ ಶಾಕ್: ಜ. 14ರವರೆಗೂ ಇದೇ ರೀತಿ ವಾತಾವರಣ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಚಳಿ ಉಂಟಾಗಿದೆ. ಭಾರಿ ಚಳಿ ಮತ್ತು ಶೀತ ಗಾಳಿಗೆ ರಾಜ್ಯದ ಜನ ಥಂಡಾ ಹೊಡೆದಿದ್ದಾರೆ. ಜನವರಿ 14ರ ವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎನ್ನಲಾಗಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಮೈ ಕೊರೆಯುವ ಚಳಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಿದೆ. ಕಳೆದ ಎರಡು ದಿನಗಳಿಂದ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ತಾಪಮಾನ ಕುಸಿತದಿಂದ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲಸಕ್ಕೆ ಹೋಗುವ ಉದ್ಯೋಗಿಗಳು, ವಿದ್ಯಾರ್ಥಿಗಳು, ಪಾದಚಾರಿಗಳು, ವಾಕಿಂಗ್ ಹೋಗುವವರು, ಮಕ್ಕಳು, ವೃದ್ಧರು ಟೋಪಿ, ಬೆಚ್ಚನೆಯ ಉಡುಪು ಹಾಕಿಕೊಳ್ಳಲು ಸಲಹೆ ನೀಡಲಾಗಿದೆ. ಲಾಲ್ಬಾಗ್ ಸೇರಿದಂತೆ ಹಲವು ಪಾರ್ಕುಗಳಲ್ಲಿ ವಾಕ್ ಮಾಡುವವರಿಗೆ ಸಲಹೆ ನೀಡಲಾಗಿದೆ. ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ವೃದ್ದರು, ಮಕ್ಕಳು ರೋಗಿಗಳ ಬಗ್ಗೆ ಕಾಳಜಿ ವಹಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular